ಬೆಂಗಳೂರು : ನಂದಿನಿ ಹಾಲಿನಲ್ಲಿ ಪ್ಯಾಕೆಟ್ ಮೇಲೆ ನಟ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ಹಾಕಲಾಗಿದೆ ಎಂಬ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಕೆಎಂಎಫ್ ಸ್ಪಷ್ಟನೆ ನೀಡಿದೆ. ನಂದಿನಿ ಹಾಲಿನ ಪ್ಯಾಕ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕಿಲ್ಲ ಸ್ಪಷ್ಟಪಡಿಸಿದೆ.
ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಲಾಗಿದ್ದು, ಅವರಿಗೆ ವಿಶೇಷ ಗೌರವ ಸೂಚಿಸಲಾಗಿದೆ ಎಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರ ಹಾಕಿದ ಫೋಓ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಗಳ ಮೇಲೆ ಮುದ್ರಿಸಿಲ್ಲ. ಯಾರೋ ಅಭಿಮಾನಿಗಳು ಈ ರೀತಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೆಎಂಎಫ್ ನಿಂದ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದಾಗಿ ಕೆಎಂಎಫ್ ಸ್ಪಷ್ಟಪಡಿಸಿದೆ.
Advertisement. Scroll to continue reading.
ಇನ್ನು ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್ನ ನಂದಿನಿ ಉತ್ಪನ್ನಗಳಿಗೆ ಪುನೀತ್ ಅವರು ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ ಎಂಬುದು ವಿಶೇಷ.