ಕರಾವಳಿ

ಉಡುಪಿ : ನೂತನ ಮಾರ್ಗಸೂಚಿ ಪ್ರಕಟಿಸಿದ ಡಿಸಿ ಕೂರ್ಮಾ ರಾವ್

3

ಉಡುಪಿ : ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರೆಸಿ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ನಡುವೆ ಉಡುಪಿ ಡಿಸಿ ಕೂರ್ಮಾ ರಾವ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಈ ಹಿಂದೆ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿ :

ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ

Advertisement. Scroll to continue reading.

ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 10.00 ಗಂಟೆಯಿಂದ ಸೋಮವಾರ ಬೆಳ್ಳಿಗ್ಗೆ 5.00 ಗಂಟೆಯ ವರೆಗೆ ವಾರಾಂತ್ಯ ಕರ್ಫ್ಯೂ

ಎಲ್ಲಾ ಕಛೇರಿಗಳು ವಾರದ 5 ದಿನಗಳು ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯಾಚರಿಸುವುದು

ಸಾರ್ವಜನಿಕ ಸಾರಿಗೆ ಸಂಸ್ದೆಗಳು , ಬಿ.ಎಂ.ಆರ್.ಸಿ.ಎಲ್.ಗಳನ್ನೊಳಗೊಂಡು ಸದ್ರಿ ಸಂಸ್ದೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದನ್ವಯ ವಾರಾಂತ್ಯದಲ್ಲಿ ತುರ್ತು ಅವಶ್ಯಕತೆಗಳಿಗೆ ಅನುಸಾರವಾಗಿ ಸಾರ್ವಜನಿಕರಿಗೆ ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಾಚರಿಸುವುದು.

ಪಬ್ ಗಳು / ಕ್ಲಬ್ ಗಳು /ರೆಸ್ಟೋರೆಂಟ್ ಗಳು/ ಬಾರ್ ಗಳು /ಹೋಟೇಲ್ ಗಳು / ಹೋಟೆಲ್ ಗಳಲ್ಲಿ ಆಹಾರ ಸೇವಿಸಲು ಕಾಯ್ದಿರಿಸುವ ಸ್ಧಳಗಲ್ಲಿ ಶೇ. 50% ರಷ್ಟು ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಕಾರ್ಯಾ ನಿರ್ವಹಿಸುವುದು. ಹಾಗೂ 2 ಡೋಸ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಇಂತಹ ಸ್ದಳಗಳಿಗೆ ಪ್ರವೇಶ ಕಲ್ಪಿಸುವುದು.

Advertisement. Scroll to continue reading.

ಸಿನಿಮಾ ಹಾಲ್/ಮಲ್ಟಿಪ್ಲೆಕ್ಸ್ /ಥಿಯೇಟರ್/ ರಂಗಮಂದಿರಗಳು/ ಅಡಿಟೋರಿಯಂ ಮತ್ತು ಇಂತಹ ಇತರ ಸ್ಧಳಗಲ್ಲಿ ಶೇ. 50% ರಷ್ಟು ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಕಾರ್ಯನಿರ್ವಹಿಸುವುದು ಹಾಗೂ ಎರಡು ಡೋಸ್ ಕೋವಿಡ್ -19 ಲಸಿಕೆ ಪಡೆದಿರುವಂತಹ ವ್ಯಕ್ತಿಗಳಿಗೆ ಮಾತ್ರ ಇಂತಹ ಸ್ದಳಗಳಿಗೆ ಪ್ರವೇಶ ಕಲ್ಪಿಸುವುದು.

ತೆರೆದ ಪ್ರದೇಶಗಳಲ್ಲಿ ನಡೆಸುವ ಮದುವೆ ಕಾರ್ಯಕ್ರಮಕ್ಕೆ 200 ಹಾಗೂ ಹಾಲ್ ಗಳಲ್ಲಿ ನಡೆಸುವ ಮದುವೆ ಕಾರ್ಯಕ್ರಮಕ್ಕೆ 100 ಮಂದಿ ಪಾಲ್ಗೊಳ್ಳಲು ಮಾತ್ರ ಅವಕಾಶ

ಧಾರ್ಮಿಕ ಸ್ಧಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅವಕಾಶ. ಯಾವುದೇ ರೀತಿಯಲ್ಲಿ ಸೇವೆ ಹಾಗೂ ಮತ್ತಿತರ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. 2 ಡೋಸ್ ಲಸಿಕೆಯನ್ನು ಪಡೆದಿರುವ 50 ಜನರಿಗೆ ಮಾತ್ರ ಏಕಕಾಲದಲ್ಲಿ ಪ್ರವೇಶಕ್ಕೆ ಅವಕಾಶ

ಮಾಲ್ ಗಳು, ಶಾಫಿಂಗ್ ಕಟ್ಟಡಗಳು, ಎಲ್ಲಾ ರೀತಿಯ ಸ್ವಯಂ ಅಂಗಡಿಗಳು ಹಾಗೂ ಸ್ದಾಪನೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯಾಚರಿಸುವುದು.

Advertisement. Scroll to continue reading.

ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂ, ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ಗಳು ಶೇ. 50 ರ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸುವುದು. 2 ಡೋಸ್ ಲಸಿಕೆಯನ್ನು ಪಡೆದಿರುವ ಜನರಿಗೆ ಮಾತ್ರ ಪ್ರವೇಶ.

ಎಲ್ಲಾ ರ‍್ಯಾಲಿಗಳನ್ನು, ಧರಣಿಗಳನ್ನು , ಪ್ರತಿಭಟನೆಗಳಿಗೆ ಅವಕಾಶವಿಲ್ಲ

ಕೇರಳ ರಾಜ್ಯದಿಂದ ಹಾಗೂ ಮಹಾರಾಷ್ಟ್ರ ರಾಜ್ಯದಂತಹ ಗಡಿ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರನ್ನು ಪತ್ತೆ ಹಚ್ಚಿ ಅಗತ್ಯ ಕ್ರಮವಹಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾಗಿರುವ ಸುತ್ತೋಲೆ/ ನಿರ್ದೇಶನವನ್ನು ಪಾಲಿಸುವುದು. ಸದರಿ ಮಾರ್ಗಸೂಚಿಗಳನ್ನು ಗೋವಾ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರಿಗೂ ವಿಸ್ತರಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು/ ಮಾರ್ಗಸೂಚಿಗಳು/ ಪುಮಾಣಿತ ಕಾರ್ಯ ವಿಧಾನ( SOP) ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

Advertisement. Scroll to continue reading.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com