ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ಬಗ್ಗರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿ ಸಿ ಆರ್ ಪರೀಕ್ಷೆಯಲ್ಲಿ ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ, 7 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ.
ಇನ್ನೂ 7 ದಿನಗಳು ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ, ಮತ್ತೆ ಆರ್ ಟಿ ಪಿ ಸಿ ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಆ ವರದಿಯನ್ನು ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡುವಂತೆ ತಿಳಿಸಲಾಗಿದೆ.
Advertisement. Scroll to continue reading.
ಒಂದು ವೇಳೆ ವಿದೇಶಿ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಲಾಗಿದೆ.