ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಹತ್ವದ ಸಭೆ ಕರೆದಿದ್ದಾರೆ. ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದ್ದು, ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಭಾನುವಾರ ನಡೆದ ಉನ್ನತ ಮಟ್ಟದ ಕೋವಿಡ್ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಮೋದಿ, ಜಿಲ್ಲಾಮಟ್ಟದಲ್ಲಿ ಸೂಕ್ತ ಆರೋಗ್ಯ ಮೂಲಸೌಕರ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಕರೆ ನೀಡಿದ್ದರು.
Advertisement. Scroll to continue reading.
ಕೋವಿಡ್ ವಿರುದ್ಧದ ಹೋರಾಟದಲ್ಲಿ ವ್ಯಾಕ್ಸಿನೇಷನ್ ಅತ್ಯಂತ ಪರಿಣಾಮಕಾರಿ ಎಂದು ಪ್ರಧಾನಿ ಮೋದಿ ಹೇಳಿದ್ದರು. 2020 ರಲ್ಲಿ ಕೊರೋನಾ ಸಾಂಕ್ರಾಮಿಕ ಕಾಯಿಲೆ ಆರಂಭವಾದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,68,063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.