ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್ ದೃಢಪಟ್ಟಿದೆ. ಅವರ ಪತ್ನಿಗೂ ಕೊರೋನಾ ದೃಢ ಪಟ್ಟಿದೆ.
ಈ ಬಗ್ಗೆ ಭರತ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಸಾಮಾನ್ಯ ಲಕ್ಷಣಗಳೊಂದಿಗೆ ಕೊರೋನಾ ದೃಢ ಪಟ್ಟಿದೆ. ಹೋಂ ಐಸೋಲೇಶನ್ ನಲ್ಲಿದ್ದು, ಸಂಪರ್ಕಿತರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Advertisement. Scroll to continue reading.