ಉತ್ತರ ಪ್ರದೇಶ : ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ 2022ರಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ.
ಈ ಮೂಲಕ ಈ ಬಾರಿಯ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಬಿಎಸ್ ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಅವರು ಮಾಹಿತಿ ನೀಡಿದ್ದಾರೆ.
Advertisement. Scroll to continue reading.
ಮಾಜಿ ಮುಖ್ಯಮಂತ್ರಿ ಮಾಯಾವತಿ ಮತ್ತು ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಮಾಜವಾದಿ ಪಕ್ಷಕ್ಕೆ 400 ಅಭ್ಯರ್ಥಿಗಳಿಲ್ಲದಿದ್ದರೆ, ಅವರು 400 ಸ್ಥಾನಗಳನ್ನು ಹೇಗೆ ಗೆಲ್ಲುತ್ತಾರೆ? ಎಸ್‌ಪಿ ಅಥವಾ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿರುವ ಬಗ್ಗೆ ಸುದ್ದಿ ಸಂಸ್ಥೆ ಎ ಎನ್ ಐ ವರದಿ ಮಾಡಿದೆ.