ಬೆಂಗಳೂರು : ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನ ಜನವರಿ ತಿಂಗಳಾಂತ್ಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ಮಾರ್ಗಸೂಚಿಗಳನ್ನ ಯಾಥಾವತ್ತಾಗಿ ಜನವರಿ 31ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ
ಇಂದು ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ 10,800 ಜನರಿಗೆ ಸೋಂಕು ದೃಢಪಟ್ಟಿದೆ.
Advertisement. Scroll to continue reading.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಕಳೆದ 24 ಗಂಟೆಯಲ್ಲಿ 1,40,452 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 10,800 ಸೇರಿದಂತೆ ರಾಜ್ಯಾದ್ಯಾಂತ 14,473 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 14,473 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ 10%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ಐದು ಜನ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement. Scroll to continue reading.