ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಗೆ ಕೋವಿಡ್ ಸೋಂಕು ತಗುಲಿದೆ. ಸದ್ಯ ಅವರು ಹೋಮ್ ಕ್ವಾರಂಟೈನ್ನಲ್ಲಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ 19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಅಗತ್ಯವಿರುವ ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ ಮತ್ತು ನಾನು ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ಪ್ರತ್ಯೇಕಿಸಿ, ಪರೀಕ್ಷೆಗೆ ಒಳಪಡಿಸುವಂತೆ ನಾನು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.
ಈಗಾಗಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕ ರಾಜಕಾರಣಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.