ವರದಿ : ದಿನೇಶ್ ರಾಯಪ್ಪನಮಠ
ಕೋಟ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಉಡುಪಿ ಅಷ್ಟ ಮಠಗಳಲ್ಲೊಂದಾದ ಫಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಶ್ರೀ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಾರ್ಥವಾಗಿ ಪ್ರಾರ್ಥಿಸಿದರು.
ಇದೇ ಸಂದರ್ಭ ದೇವಳದ ವತಿಯಿಂದ ಪೂಜ್ಯರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಗೌರವಿಸಲಾಯಿತು.
Advertisement. Scroll to continue reading.
ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾದ್ಯಾಯ, ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ದೇಗುಲದ ವ್ಯವಸ್ಥಾಪಕ ನಟೇಶ್ ಕಾರಂತ್, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.