ದೆಹಲಿ : ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು.
ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ರಾಷ್ಟ್ರದ ಏಳ್ಗೆಗೆ ಉತ್ತಮ ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ತಮ್ಮ ಟ್ವೀಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಟ್ವೀಟ್ ಉಲ್ಲೇಖಿಸಿ, ಕೇಂದ್ರವು ರಾಜ್ಯಕ್ಕೆ ಬೆನ್ನೆಲುಬಾಗಿರುತ್ತದೆ. ಎಂದು ಭರವಸೆ ನೀಡಿದ್ದಾರೆ.
”ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕದ ನನ್ನ ಸಹೋದರರು ಮತ್ತು ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ರಾಜ್ಯದ ಜನರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾ ಶ್ರಮಿಸಲಿವೆ” ಎಂದು ಟ್ವೀಟ್ ಮಾಡುವ ಮೂಲಕ ಶುಭಹಾರೈಸಿದ್ದಾರೆ.
Advertisement. Scroll to continue reading.