ಧಾರವಾಡ: ಕನ್ನಡ ಹಿರಿಯ ಸಾಹಿತಿ, ನಾಡೋಜ ಪ್ರಶಸ್ತಿ ಪುರಸ್ಕೃತ ಕವಿ ಡಾ.ಚೆನ್ನವೀರ ಕಣವಿಯವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದ್ದು,
ಅವರು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಸದ್ಯ ಆರೋಗ್ಯ ಸ್ಥಿರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ಮ್ಯಾನೇಜ್ಮೆಂಟ್ ನೊಂದಿಗೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.
Advertisement. Scroll to continue reading.