ನವದೆಹಲಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವರು ನಮ್ಮ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರ ತ್ಯಾಗಕ್ಕೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ 125ನೇ ಜನ್ಮದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ, ಈ ಬಗ್ಗೆ ಟ್ವಿಟ್ಟರ್‌ಲ್ಲಿ ಹಂಚಿಕೊಂಡಿದ್ದಾರೆ.
ಪರಾಕ್ರಮ್ ದಿನದಂದು ಎಲ್ಲಾ ದೇಶವಾಸಿಗಳಿಗೆ ಶುಭ ಹಾರೈಕೆಗಳು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಿಸುತ್ತೇನೆ. ಪ್ರತಿಯೊಬ್ಬ ಭಾರತೀಯನೂ ನಮ್ಮ ರಾಷ್ಟ್ರಕ್ಕೆ ನೀಡಿದ ಕೊಡುಗೆಯ ಬಗ್ಗೆ ಹೆಮ್ಮೆ ಪಡುತ್ತಾನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.
ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ಸ್ಥಾಪಿಸಲಿದ್ದಾರೆ.