ವರದಿ : ದಿನೇಶ್ ರಾಯಪ್ಪನಮಠ
ಕೋಟ: ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ ಸರಕಾರಿ ಪ್ರೌಢಶಾಲೆ ಇಲ್ಲಿ ರಾಷ್ಟ್ರೀಯ ಮತದಾರರ ದಿವಸ ಆಚರಣೆ ‘ ಕಾರ್ಯಕ್ರಮ ಮಂಗಳವಾರ ಜರುಗಿತು.
ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ತಿಳಿಸಿ, ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
Advertisement. Scroll to continue reading.
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಕುಮಾರಿ ಸಹನಾ( 9ನೆಯ ತರಗತಿ ) ಮತದಾರರ ದಿವಸ ಆಚರಣೆಯ ಮಹತ್ವದ ಕುರಿತು ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚುನಾವಣಾ ಸಾಕ್ಷರತಾ ಕ್ಲಬ್ನ ನೋಡಲ್ ಅಧಿಕಾರಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ಅನಿತಾ ನಿರೂಪಿಸಿ ವಂದಿಸಿದರು.
Advertisement. Scroll to continue reading.