ಬೆಂಗಳೂರು : ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಎಂ ಎಲ್ ಸಿ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೆವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೆವು. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆಯುವ ಸುಳಿವು ಕೊಟ್ಟಿದ್ದಾರೆ.
ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೋರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಮುನ್ಸಚನೆ ಇತ್ತು. ಇದು ತಿಳಿದು ಬಾದಾಮಿಯಲ್ಲಿ ನಾಮ ಪಾತ್ರ ಹಾಕಿಸಿದ್ದೆ. ಅಲ್ಲಿ ಎಲ್ಲ ನಾಯಕರನ್ನು ಒಪ್ಪಿಸಿ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದೆ. ಬಳಿಕ ಬದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದು ಶಾಸಕರಾದರು ಎಂದರು.
Advertisement. Scroll to continue reading.
ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ. ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾನ ಮಾಡುತ್ತೇನೆ. ನನಗೆ ಸ್ಥಾನ ತಪ್ಪಿಸಿದ್ದರ ಬಗ್ಗೆ ಸಿದ್ಧರಾಮಯ್ಯ ಉತ್ತರಿಸಬೇಕು. ಡಿ.ಕೆ. ಶಿವಕುಮಾರ್ ಗೂ ನಮಗೂ ಹೊಂದಾಣಿಕೆಯಾಗಲ್ಲ. ಸಿದ್ದರಾಮಯ್ಯ ಹಾಗೂ ನನಗೂ ಚೆನ್ನಾಗಿತ್ತು. ರಾಜಕೀಯ ವಿದ್ಯಮಾನ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮಾಧ್ಯಮ, ನ್ಯಾಯಾಂಗದಲ್ಲಿ ಮಾತ್ರ ವಿಶ್ವಾಸ ಉಳಿದಿದೆ. ನನಗೆ ಸ್ವಲ್ಪ ಸಾಲ ಇದೆ ಅದನ್ನು ತೀರಿಸಬೇಕಾಗಿದೆ. ಸಾಲ ತೀರಿದ್ದರೆ ಮೊದಲೇ ತೀರ್ಮಾನ ಮಾಡುತ್ತಿದ್ದೆ. ಸಾಲ ತೀರಿಸಿ 8-10 ದಿನದಲ್ಲಿ ತೀರ್ಮಾನ ಮಾಡುತ್ತೇನೆ. ಹೆಚ್. ಡಿ ಕುಮಾರಸ್ವಾಮಿ ಕರೆ ಮಾಡಿ ಮಾತನಾಡಿದ್ದಾರೆ. ಇಂದು ಬೆಳಗ್ಗೆ ಕರೆ ಮಾಡಿ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಕೆಲವು ನಾಯಕರು ಕರೆ ಮಾಡಿ ಮಾತಾಡಿದ್ದಾರೆ. ಅವರು ಹೆಸರು ಹೇಳಿದರೆ ಅವರಿಗೂ ಸಮಸ್ಯೆಯಾಗುತ್ತದೆ. ಕಾಂಗ್ರೆಸ್‌ನವರಿಗೂ ನಮಗೆ ವಿಶ್ವಾಸವಿರುವುದು ನಿಜ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 120ರಿಂದ 80ಕ್ಕೆ ಬಂದಿದೆ. 80ರಿಂದ ಮತ್ತೆ ಎಲ್ಲಿಗೆ ಬರುತ್ತೆಂದು ನೀವು ನೋಡಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
Advertisement. Scroll to continue reading.