ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ(30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ಪ್ರಧಾನಿ ಮೋದಿ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದು, ಸಾಂತ್ವನ ಹೇಳಿದ್ದಾರೆ.
ಇಂದು ಬೆಳಿಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿನ ದುಃಖದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ದು, ಸಾಂತ್ವನ ಹೇಳಿದ್ದಾರೆ ಎನ್ನಲಾಗಿದೆ.
ಈಗಾಗಲೇ ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆಯನ್ನು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಸೌಂದರ್ಯ ಕುತ್ತಿಗೆ ಭಾಗದಲ್ಲಿ ಮಾರ್ಕ್ ಇದೆ. ಅದು ಬಿಟ್ಟರೇ ಬೇರೆ ಯಾವುದೇ ಮಾರ್ಕ್ ಇಲ್ಲ ಎಂದು ಮರಣೋತ್ತರ ಪರೀಕ್ಷೆಯ ನಂತ್ರ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.
Advertisement. Scroll to continue reading.
ಮೃತದೇಹವನ್ನ ನಗರ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿರುವ ಸೌಂದರ್ಯ ಪತಿ ಡಾ. ನೀರಜ್ ನಿವಾಸಕ್ಕೆ ರವಾನಿಸಲಾಗಿದೆ. ಮನೆ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಯಶವಂತಪುರ ಎಸಿಪಿ ನೇತೃತ್ವದಲ್ಲಿ ಪೊಲೀಸರಿಂದ ಭದ್ರತೆ ನೀಡಲಾಗ್ತಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಭೇಟಿ ನೀಡಿದ್ದಾರೆ