ವರದಿ : ದಿನೇಶ್ ರಾಯಪ್ಪನಮಠ
ಕೋಟ: ಕೂಟಮಹಾಜಗತ್ತು ಅಂಗಸಂಸ್ಥೆ ಸಾಲಿಗ್ರಾಮ ಇದರ ವತಿಯಿಂದ ಭಜನಾ ಸೇವಾ ಕಾರ್ಯಕ್ರಮ ಶನಿವಾರ ಶ್ರೀದೇವಳದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಉದ್ಘಾಟಿಸಿ ಮಾತನಾಡಿ , ಪೇಜಾವರ ಶ್ರೀ ವಿಶ್ವೇಶ ತೀರ್ಥರನ್ನು ಉದಾಹರಿಸುತ್ತಾ ಅಲ್ಪ ತೃಪ್ತನಾದ ಭಗವಂತನ ಓಲೈಕೆಯ ಮಾರ್ಗಗಳಲ್ಲಿ ಭಜನೆಯು ಸುಲಭ ಸಾಧ್ಯವೂ, ವೈಜ್ಞಾನಿಕವೂ ಆಗಿದೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ನಿಕಟಪೂರ್ವ ಉಪಾಧ್ಯಕ್ಷ ಕೆ.ತಾರಾನಾಥ ಹೊಳ್ಳರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಯುಕ್ತಿಗೊಂಡ ಹಿನ್ನಲ್ಲೆಯಲ್ಲಿ ಗೌರವಿಸಲಾಯಿತು.
Advertisement. Scroll to continue reading.
ಭಜನಾ ಕಾರ್ಯಕ್ರಮದ ಹಿನ್ನಲ್ಲೆಯಲ್ಲಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಕಾರ್ಯದರ್ಶಿ ಮಹಾಬಲ ಹೇರ್ಳೆಯವರನ್ನು ದೇವಳದ ಪರವಾಗಿ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ತುಂಗ ಪ್ರಸಾದವನ್ನು ನೀಡಿ ಶುಭ ಹಾರೈಸಿದರು.
ಕೂಟ ಮಹಾಜಗತ್ತು ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಸ್ವಾಗತಿಸಿದರು. ಉಜಿರೆ ಸಂತಾನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮತ್ತು ಮುಖ್ಯಸ್ಥ ರವೀಂದ್ರ ಉಪ್ಪಂತಾಯ, ಪೂರ್ವ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಐತಾಳ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.