ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಪರಿಚಯದ ಅನ್ಯಕೊಮಿನ ವಿದ್ಯಾರ್ಥಿನಿಯೋರ್ವಳ ಜೊತೆ ಮಾತನಾಡಿದ್ದಕ್ಕೆ ಹಿಂದೂ ವಿದ್ಯಾರ್ಥಿಗೆ ನಾಲ್ವರು ಯುವಕರು ಬಸ್ಸಿನಲ್ಲೇ ಹಿಗ್ಗಾಮುಗ್ಗ ಥಳಿಸಿ ಜೀವ ಬೆದರಿಕೆ ಹಾಕಿದ ಘಟನೆ ಗುರುವಾರ ಹಾಲಾಡಿ ಸಮೀಪದ ಕಾಸಾಡಿ ಎಂಬಲ್ಲಿ ನಡೆದಿದೆ.
ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್ ಹಲ್ಲೆಗೊಳಗಾದ ಯುವಕ.
Advertisement. Scroll to continue reading.
ಬೆಳಿಂಜೆ ನಿವಾಸಿ ಶಶಾಂಕ್ ಅವರು ಸ್ನೇಹಿತರಾದ ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಅನ್ಯಕೊಮಿನ ನಾಲ್ವರ ತಂಡ ಶಶಾಂಕ್ ಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ಮಾಡಿದವರ ಪೈಕಿ ಮೂವರು ಬಸ್ಸಿನಿಂದ ಇಳಿದುಹೋಗಿದ್ದು ಓರ್ವ ಮಾತ್ರ ಕುಂದಾಪುರದವರೆಗೆ ಬಸ್ಸಿನಲ್ಲೇ ಬಂದಿದ್ದಾನೆ ಎನ್ನಲಾಗಿದೆ. ಗಾಯಾಳು ಯುವಕನಿಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಿಂದು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದ ಕೂಡಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಜಮಾಯಿಸಿದ್ದರು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸಿಪಿಐ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
Advertisement. Scroll to continue reading.