ಚಿತ್ರದುರ್ಗ: ಟೋಲ್ ಗೇಟ್ ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಗುಯಿಲಾಳು ಟೋಲ್ ಗೇಟ್ ನಲ್ಲಿ ಇಂದು ನಡೆದಿದೆ. ಮೃತರನ್ನು ರಮೇಶ್, ವಿಶ್ವನಾಥ್, ಸೀಮಾ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಟೋಲ್ ಪಾಸ್ ಮಾಡುವ ಸಮಯದಲ್ಲಿ ಟೋಲ್‌ಗೇಟ್‌ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ವೇಗವಾಗಿ ಬಂದು ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತರನ್ನು ಬೆಳಗಾವಿ ಮೂಲದವರು ಎನ್ನಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯು ಟೋಲ್‌ಗೇಟ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Advertisement. Scroll to continue reading.