ಬೆಂಗಳೂರು : ಹಿಜಾಬ್ ವಿವಾದ ಬೆನ್ನೆಲ್ಲೇ ಸಮವಸ್ತ್ರ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ.
ಸಮವಸ್ತ್ರ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ‘ಆಯಾ ಶಾಲೆಗಳು ನಿಗದಿ ಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು.
ಇನ್ನು ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿ ನಿಗದೀಪಡಿಸಿದ ಸಮವಸ್ತ್ರವೇ ಕಡ್ಡಾಯವಾಗಿರುತ್ತದೆ ಎಂದಿದೆ.
Advertisement. Scroll to continue reading.
ಹಿಜಾಬ್ ಹಾಗೂ ಕೇಸರಿ ಶಾಲು ಜಟಾಪಟಿಗೆ ಬ್ರೇಕ್ ಹಾಕಲು ಸರ್ಕಾರ ಪ್ರಯತ್ನಿಸಿದ್ದು, ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.