ಕರಾವಳಿ

ಬಂಟ್ವಾಳ : ತಾಲೂಕು ಎಬಿವಿಪಿ ಅಭ್ಯಾಸ ವರ್ಗ

1

ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗ ಬಿ.ಸಿ ರೋಡಿನ ಗೀತಾಂಜಲಿ ಸಭಾಭವನದಲ್ಲಿ ಜರುಗಿತು‌.
ಕಾರ್ಯಕ್ರವನ್ನು ನಿವೃತ್ತ ಯೋಧ, ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥೆರಪಿ ವಿಭಾಗದ ಮುಖ್ಯಸ್ಥ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ಇವರು ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.


ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.
ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಇವರು ನಡೆಸಿಕೊಟ್ಟರು.
ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನಡೆಸಿಕೊಟ್ಟರು.

ಸಮಾರೋಪ ಸಮಾರಂಭ :

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು.
ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲಾಶ್ ಉಪಸ್ಥಿತರಿದ್ದರು.
ಸಿದ್ಧಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com