ಸಿನಿಮಾ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ; ದೇಶದಲ್ಲಿ ಎರಡು ದಿನ ಶೋಕಾಚರಣೆ

3

ಮುಂಬೈ : ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ (92) ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.

ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ. ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ.

ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಹೇಳಲಾಗಿದೆ.

Advertisement. Scroll to continue reading.

ಲತಾ ಮಂಗೇಶ್ಕರ್ ಅವರಿಗೆ ಜನವರಿ 8 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಅವರಿಗೆ ನ್ಯುಮೋನಿಯಾವೂ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುವಿನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com