ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸೋಮವಾರ ನಡೆದಿದೆ.
ಕಾಲೇಜಿಗೆ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಗೇಟಿನ ಬಳಿ ಅವರನ್ನು ತಡೆದಿದ್ದಾರೆ. ಸರಕಾರದ ಆದೇಶದ ಬಗ್ಗೆ ಪ್ರಭಾರ ಪ್ರಾಂಶುಪಾಲರು ಅವರಿಗೆ ತಿಳಿಸಿದ್ದು, ವಸ್ತ್ರ ಸಂಹಿತೆಯ ಬಗ್ಗೆ ತಿಳಿ ಹೇಳಿದ್ದಾರೆ. ಈ ವೇಳೆಗಾಗಲೇ ಕಾಲೇಜಿನ ಮತ್ತೊಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟಿಸಿದ್ದು, ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ಏರ್ಪಟ್ಟಿತ್ತು.
Advertisement. Scroll to continue reading.
ಬಳಿಕ ಹಿಜಾಬ್ ಧರಿಸಿದ ಮೂವರು ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದೆ ಮನೆಗೆ ತೆರಳಿದರು. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಶಾಲು ತೆಗೆದಿಟ್ಟು ತರಗತಿಗೆ ತೆರಳಿದರು.