ರಾಜ್ಯ

ಹಿಜಾಬ್ – ಕೇಸರಿ ಶಾಲು ವಿವಾದ: ಕೋರ್ಟ್ ಆದೇಶದ ಬಳಿಕ ಮುಂದಿನ ನಿರ್ಧಾರ: ಸಿಎಂ ಬೊಮ್ಮಾಯಿ

1

ದೆಹಲಿ: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಕರಾವಳಿಯಲ್ಲಿ ಆರಂಭಗೊಂಡ ಹಿಜಾಬ್ ವರ್ಸಸ್ ಕೇಸರಿ ವಿವಾದ ರಾಜ್ಯದ ಇತರ ಜಿಲ್ಲೆಗಳಿಗೂ ಹಬ್ಬಿದೆ. ಇದೇ ಸಂದರ್ಭದಲ್ಲಿ ದೆಹಲಿಗೆ ತೆರಳಿರುವಂತಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಂತಿ ಕದಡುವಂತ ಕೆಲಸವನ್ನು ಮಾಡಬಾರದು ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿಜಾಬ್ ವಿವಾದ ಕುರಿತಂತೆ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ಆದೇಶ ಬರುವವರೆಗೆ ವಿದ್ಯಾರ್ಥಿಗಳು ಶಾಂತಿ ಕದಡುವಂತ ಕೆಲಸ ಮಾಡಬಾರದು ಎಂದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ. ಪರೀಕ್ಷೆಗಳಿಗೆ ತಯಾರಾಗಿ.

Advertisement. Scroll to continue reading.

ರಾಜ್ಯ ಸರ್ಕಾರ ಈಗಾಗಲೇ ವಸ್ತ್ರ ಸಂಹಿತೆ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳು ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಬೇಕು. ನಾಳೆ ನ್ಯಾಯಾಲಯದಿಂದ ತೀರ್ಪು ಬರಲಿದೆ. ಆ ನಂತರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಪ್ರಸ್ತುತ ಯಾವ ನಿಯಮ ಇದೆಯೋ ಆ ನಿಯಮ ಪಾಲಿಸುವಂತೆ ಅವರು ತಿಳಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com