ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ, ಖಾಸಗಿ ಬಸ್ ಒಂದು ಸೇತುವೆಯ ಮೇಲಿನಿಂದ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿಯ ದೇವಗಿರಿ ಬಳಿ ನಡೆದಿದೆ. ಘಟನೆಯಿಂದಾಗಿ ಬಸ್ಸಿನಲ್ಲಿದ್ದಂತಹ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ದೇವಗಿರಿ ರಾ. ಹೆ. ಯಲ್ಲಿ ಬೆಂಗಳೂರಿನಿಂದ ಗೋಕಾಕ್ ಗೆ ತೆರಳುತ್ತಿದ್ದಂತ ವಿ ಆರ್ ಎಲ್ ಸಂಸ್ಥೆಗೆ ಸೇರಿದಂತ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಸೇತುವೆ ಮೇಲಿನಿಂದ ಕೆಳಗೆ ಬಿದ್ದಿದೆ. ಹೀಗಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಸೇತುವೆ ಮೇಲಿನಿಂದ ಬಸ್ ಕೆಳಗೆ ಬಿದ್ದಂತಹ ಶಬ್ದವನ್ನು ಕೇಳಿದಂತಹ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬಸ್ಸಿನಲ್ಲಿದ್ದಂತ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ, ಅಗ್ನಿಶಾಮದಳದಿಂದ ಪಲ್ಟಿಯಾದ ಬಸ್ ಎತ್ತುವ ಕಾರ್ಯ ನಡೆಸಲಾಯಿತು.
Advertisement. Scroll to continue reading.