ಬ್ರಹ್ಮಾವರ : ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ, ರಾಷ್ತ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ಸುಸಜ್ಜಿತ ನೂತನ ಕಚೇರಿಯನ್ನು ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ಮೊದಲನೇ ಮಹಡಿಯಲ್ಲಿ ಪ್ರಾರಂಭಿಸಿದ್ದು, ಕಚೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ .ನವೀನ್ ಭಟ್ ವೈ .ಉದ್ಘಾಟಿಸಿದರು.
ಬಳಿಕ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಜೀವಿನಿ ಯೋಜನೆ ಮತ್ತು ಸಿಬ್ಬಂದಿಗಳ ದಕ್ಷ ಕಾರ್ಯಕ್ಷಮತೆಯೊಂದಿಗೆ ರಾಷ್ಟ್ರಕ್ಕೆ ಮಾದರಿಯಾಗಬೇಕೆಂದು ಕರೆ ನೀಡುವ ಮೂಲಕ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸಂಜೀವಿನಿ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು. ಮುಂದಿನ ದಿನಗಳಲ್ಲಿ ಎನ್ ಆರ್ ಎಲ್ ಎಂ ಮತ್ತು ಇತರೆ ಯೋಜನೆಗಳು ಸೇರಿ ಉತ್ತಮ ಇ – ಪತ್ರಿಕೆ ಸಿದ್ದಪಡಿಸಿ ಯೋಜನೆಗಳು ಗ್ರಾಮ ಮಟ್ಟಕ್ಕೂ ತಲುಪುವಂತೆ ಮಾಡಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಎಂ, ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಕ್ತಾ.,ಕೆ .ಆರ್ .ಐ .ಡಿ .ಎಲ್ .ಕಾರ್ಯ ನಿರ್ವಾಹಕ ಇಂಜಿನಿಯರ್ ಸುರೇಶ್ ಬಾಬು ಉಪಸ್ಥಿತರಿದ್ದರು.
Advertisement. Scroll to continue reading.
ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ ಪ್ರಾಸ್ತಾವಿಕ ಮಾತನಾಡಿದರು. ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ನಿರೂಪಿಸಿದರು. ಜಿಲ್ಲಾ ವ್ಯವಸ್ಥಾಪಕಿ ನವ್ಯಾ ಸ್ವಾಗತಿಸಿ, ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ವಂದಿಸಿದರು.