ಅಹಮದಾಬಾದ್ : 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 49 ಅಪರಾಧಿಗಳ ಪೈಕಿ 38 ಮಂದಿಗೆ ಗುಜರಾತ್ನ ವಿಶೇಷ ನ್ಯಾಯಾಲಯ ಇಂದು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ
2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 49 ಅಪರಾಧಿಗಳ ಪೈಕಿ 38 ಮಂದಿಗೆ ಗುಜರಾತ್ನ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ.
ಈ 38 ಅಪರಾಧಿಗಳನ್ನು ಐಪಿಸಿ 302, ಯುಎಪಿಎ ಅಡಿಯಲ್ಲಿ ಗಲ್ಲಿಗೇರಿಸಲಾಗುವುದು. ಉಳಿದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಒಟ್ಟು 7015 ಪುಟಗಳ ತೀರ್ಪು ನೀಡಲಾಗಿದೆ. ಅಪರಾಧಿಗಳು ಅಹಮದಾಬಾದ್, ಭೋಪಾಲ್, ಗಯಾ, ಬೆಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿನ ಜೈಲುಗಳಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
Advertisement. Scroll to continue reading.
ಜುಲೈ 26, 2008 ರಂದು ಅಹಮದಾಬಾದ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 56 ಜನರು ಸಾವನ್ನಪ್ಪಿದ್ದರು. ಹಾಗೂ 70 ನಿಮಿಷಗಳಲ್ಲಿ 200 ಕ್ಕೂ ಹೆಚ್ಚು ಜನರು ಗಾಯಗೊಂಡರು.
ನ್ಯಾಯಾಲಯದಲ್ಲಿ 13 ವರ್ಷಗಳಿಗೂ ಹೆಚ್ಚು ಕಾಲ ನಡೆದ ಪ್ರಕರಣದ ವಿಚಾರಣೆ ನಡೆದಿದ್ದು, 49 ಜನರನ್ನು ಅಪರಾಧಿಗಳೆಂದು ಘೋಷಿಸಲಾಯಿತು. 28 ಜನರರನ್ನು ಕಳೆದ ವಾರ ಬಿಡುಗಡೆ ಮಾಡಲಾಗಿದೆ.
ಆರೋಪಿಗಳು ಇಂಡಿಯನ್ ಮುಜಾಹಿದೀನ್ ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 2002ರ ಗೋಧ್ರಾ ದಂಗೆಗೆ ಸೇಡು ತೀರಿಸಿಕೊಳ್ಳಲು ಇಂಡಿಯನ್ ಮುಜಾಹಿದ್ದೀನ್ ಉಗ್ರರು ಸಂಚು ರೂಪಿಸಿದ್ದರು ಎಂದು ಆರೋಪ ಕೇಳಿ ಬಂದಿತ್ತು.
Advertisement. Scroll to continue reading.