ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿತ್ತು.
ಶಾಲಾ – ಕಾಲೇಜುಗಳಿಗೆ ರಜೆಯನ್ನೂ ನೀಡಲಾಗಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭಕ್ಕೆ ಡಿಸಿ ಡಾ. ಸೆಲ್ವ ಮಣಿ ಆದೇಶಿಸಿದ್ದಾರೆ.
ಈ ಮೂಲಕ ಕಳೆದ ಒಂದು ವಾರದಿಂದ ಬಂದ್ ಆಗಿದ್ದಂತಹ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ.
Advertisement. Scroll to continue reading.
ಬಜರಂಗದಳದ ಕಾರ್ಯಕರ್ತ ಹರ್ಷ ಫೆ. 20 ರಂದು ಹತ್ಯೆಯಾಗಿತ್ತು. ಈ ಕುರಿತು 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಸಲಾಗುತ್ತಿದೆ.