ಚಂದನವನ: ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದಿದ್ದಾರೆ.
ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಟಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
Advertisement. Scroll to continue reading.