ಮಾರ್ಚ್ 3 ರಂದು ವಿಶ್ವ ಕನ್ನಡ ಸಿನಿಮಾ ದಿನ: ಸಿಎಂ ಬೊಮ್ಮಾಯಿ ಘೋಷಣೆ
Published
1
ಬೆಂಗಳೂರು : ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ..
ಅವರು 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು.
ಕನ್ನಡದ ಮೊದಲ ಟಾಕಿ ಚಿತ್ರ ಸತಿ ಸುಲೋಚನಾ ಮಾರ್ಚ್ 3ರಂದು ಬಿಡುಗಡೆಯಾಗಿದ್ದು, ಈ ದಿನವನ್ನ ‘ವಿಶ್ವ ಕನ್ನಡ ಸಿನಿಮಾ ದಿನ’ ವೆಂದು ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾತನಾಡಿದ ಅವರು. ಪುನೀತ್ ರಾಜ್ ಕುಮಾರ್ ಅವರಿಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.