ಬೆಂಗಳೂರು: ಸ್ಯಾಂಡಲ್ವುಡ್ ನಟ, ನಿರ್ಮಾಪಕ,ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ದಂಪತಿ ಇಬ್ಬರು ಒಟ್ಟಿಗೆ ಇರುವ ಪೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ರಿಷಬ್ ಶೆಟ್ಟಿ, ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಸಂತಸ ವ್ಯಕ್ತಪಡಿಸಿರುವ ರಿಷಬ್ ಶೆಟ್ಟಿ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
Advertisement. Scroll to continue reading.