ಶಿವಮೊಗ್ಗ : ಹರ್ಷ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
Published
1
ವರದಿ : ದಿನೇಶ್ ರಾಯಪ್ಪನಮಠ
ಶಿವಮೊಗ್ಗ : ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಸಕ್ರಿಯ ಹಿಂದು ಕಾರ್ಯಕರ್ತ ಹರ್ಷ ಅವರ ಮನೆಗೆ ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರ ಜೊತೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನವನ್ನು ನೀಡಿದರು.
ಬೈಂದೂರಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗಡೆ, ಸುರೇಶ್ ಬಟವಾಡಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಮಾಜಿ ಪಡುವರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ಪಡುವರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಶೆಟ್ಟಿ , ಪ್ರವೀಣ್ ಕುಮಾರ್ ಶೆಟ್ಟಿ , ಪಡುವರಿಯ ಶ್ರೀಪತಿ, ದಿನೇಶ್ ಶಿರೂರು, ಶಿವಮೊಗ್ಗ ನಗರ ಅಧ್ಯಕ್ಷ ಜಗದೀಶ್ ಮತ್ತಿತರ ಪಕ್ಷದ ಮುಖಂಡರು ಉಪಸ್ಥಿತರಿದ್ದರು.