ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement. Scroll to continue reading.