ಪಂಜಾಬ್: ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಈ ಬಾರಿ ಕಾಂಗ್ರೆಸ್ ಗೆ ಬಾರಿ ಮುಖಭಂಗವಾಗಿದೆ.
ಪಂಜಾಬ್ ವಿಧಾನ ಸಭಾ ಚುನಾವಣೆಯಲ್ಲಿ ಎಎಪಿ ಕಮಾಲ್ ಮಾಡಿದೆ. ಇದೀಗ ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿಯವರು ಎರಡೂ ಕ್ಷೇತ್ರದಿಂದ ಸೋಲು ಕಂಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮ್ಕೌರ್ ಸಾಹಿಬ್ ಮತ್ತು ಭದೌರ್ ಕ್ಷೇತ್ರಗಳಿಂದ ಸ್ಪರ್ಧಿಸಿ ಸೋತಿದ್ದಾರೆ. ಚಮ್ಕೌರ್ ಸಾಹಿಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಚರಂಜಿತ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ವಿರುದ್ಧ 6,373 ಮತಗಳಿಂದ ಜಯಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್ ಉಗೋಕೆ 36,964 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Advertisement. Scroll to continue reading.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪಂಜಾಬ್‌ನಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.