ಪಂಜಾಬ್: ನಾನು ರಾಜಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸೋದಿಲ್ಲ. ಬದಲಿಗೆ ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಾಲನ್ ಗ್ರಾಮದಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಎಎಪಿಯ ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ ಮಾನ್ ಘೋಷಿಸಿದ್ದಾರೆ.
ಇಂದು ಪಂಜಾಬ್ ನಲ್ಲಿ ಎಎಪಿ ಗೆಲುವಿನ ನಗೆ ಬೀರುತ್ತಿದೆ.
ಈ ಸಂದರ್ಭ ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಜೊತೆಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಅಧಿಕಾರ ಸ್ವೀಕರಿಸುವುದಿಲ್ಲ.
Advertisement. Scroll to continue reading.
ಬದಲಾಗಿ, ಭಗತ್ ಸಿಂಗ್ ಹುಟ್ಟೂರಾದಂತ ಖತ್ಕರ್ ಕಾಲನ್ ನಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದರು.
ಸರ್ಕಾರಿ ಕಚೇರಿಯಲ್ಲಿ ಭಗತ್ ಸಿಂಗ್, ಅಂಬೇಡ್ಕರ್ ಪೋಟೋ ಜೊತೆಗೆ ಸಿಎಂ ಪೋಟೋ ಇಡುವ ಸಂಪ್ರದಾಯವಿತ್ತು. ಈ ಸಂಪ್ರದಾಯವನ್ನು ಮುರಿದ ಅವರು, ಇನ್ಮುಂದೆ ಸರ್ಕಾರಿ ಕಚೇರಿಯಲ್ಲಿ ಸಿಎಂ ಪೋಟೋ ಹಾಕಬಾರದು ಎಂದು ಹೇಳಿದ್ದಾರೆ.
Advertisement. Scroll to continue reading.