ಚಂದನವನ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಜೇಮ್ಸ್. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು, ಸಕತ್ ಸದ್ದು ಮಾಡಿದೆ. ಇದೀಗ ಹಾಡಿನ ಸರದಿ. ಹೌದು, ಜೇಮ್ಸ್ ಚಿತ್ರದ ‘ಸಲಾಂ ಸೋಲ್ಜರ್’ ಹಾಡು ಬಿಡುಗಡೆಯಾಗಿದ್ದು, ಅಪ್ಪು ಅಭಿಮಾನಿಗಳು ಖುಷಿಯಾಗಿದ್ದಾರೆ.
ಹಾಡಿನಲ್ಲಿ ಅಪ್ಪು ದೇಶ ಕಾಯೋ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ಸಂಜಿತ್ ಹೆಗ್ಡೆ ಹಾಗೂ ಚರಣ್ ರಾಜ್ ಹಾಡನ್ನು ಹಾಡಿದ್ದು, ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ರಚಿಸಿದ್ದಾರೆ.
ಅಪ್ಪು ಹುಟ್ಟುಹಬ್ಬದಂದು ಚಿತ್ರ ಬಿಡುಗಡೆ :
Advertisement. Scroll to continue reading.
ಜೇಮ್ಸ್ ಗೆ ಚೇತನ್ ಕುಮಾರ್ ನಿರ್ದೇಶನವಿದೆ. ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪ್ರಿಯಾ ಆನಂದ್ ನಾಯಕಿ. ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಮೊದಲಾದವರು ಚಿತ್ರದಲ್ಲಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ಬಿಡುಗಡೆ ಆಗಲಿದೆ. ಪುನೀತ್ ಹುಟ್ಟಿದ ದಿನವಾದ ಮಾರ್ಚ್ 17ರಂದು ಜೇಮ್ಸ್ ತೆರೆಗೆ ಬರಲಿದೆ.
Advertisement. Scroll to continue reading.