ರಾಜ್ಯ

ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

2

ಬೆಂಗಳೂರು : ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದೇ ವೇಳೆ ನ್ಯಾಯಪೀಠ ಹಿಜಾಬ್‌ ಇಸ್ಲಾಂ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ. ವಿದ್ಯಾರ್ಥಿನಿಯರು ಶಾಲೆಗಳಲ್ಲು ಹಿಜಾಬ್ ಧರಿಸುವಂತಿಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಸಮವಸ್ತ್ರ ಕಡ್ಡಾಯವಲ್ಲ ಎಂದು ವಿದ್ಯಾರ್ಥಿನಿಗಳು ವಾದಿಸುವಂತಿಲ್ಲ. ವಿದ್ಯಾರ್ಥಿನಿಯರು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಬೇಕು. ಶಾಲೆಗಳಲ್ಲಿ ಸಮವಸ್ತ್ರ ಧರಿಸಬೇಕು ಎಂದು ಆದೇಶಿಸಿದೆ.

ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ನ್ಯಾ.ಜೆ.ಎಂ. ಖಾಜಿ ಅವರನ್ನು ಒಳಗೊಂಡ ಪೀಠ ತೀರ್ಪು ಪ್ರಕಟಿಸಿದೆ.

Advertisement. Scroll to continue reading.

ಹಿಜಾಬ್‌ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್‌ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ಇಂದು ತೀರ್ಪು ಪ್ರಕಟಗೊಂಡಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಐತಿಹಾಸಿಕ ತೀರ್ಪು ನೀಡಿ, ಹಿಜಾಬ್ ಅನುಮತಿ ಕೋರಿದ್ದಂತ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com