ಸಿನಿಮಾ

ಮೈಸೂರು ವಿವಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

4

ಮೈಸೂರು : ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರಾಜ್ಯಪಾಲರಿಂದ ಇಂದು ಸ್ವೀಕರಿಸಿದರು.

ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

Advertisement. Scroll to continue reading.

ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಗೆ ನೀಡಲಾಗಿದ್ದಂತಹ ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಪುನೀತ್ ನೆನೆದು ಕಣ್ಣೀರಿಟ್ಟರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಉಪಸ್ಥಿತರಿದ್ದರು

1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com