ಕುಂದಾಪುರ : ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳಿಂದ ದಾಳಿ: ಆರು ದೋಣಿ ವಶಕ್ಕೆ
Published
3
ಕುಂದಾಪುರ: ಇಲ್ಲಿನ ತ್ರಾಸಿ ಗ್ರಾಮದ ಅರಮ ದೇವಸ್ಥಾನದ ಸಮೀಪದ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆಗೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 4 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಮೊವಾಡಿ ಬ್ರಿಡ್ಜ್ ಸಮೀಪವೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ದೋಣಿ ಸೇರಿದಂತೆ ಒಟ್ಟು ಆರು ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ.
ದೋಣಿಯ ಮೇಲೇರಿ ಬಂದ ಅಧಿಕಾರಿ! :
ತ್ರಾಸಿ, ಮೊವಾಡಿ, ಗುಡ್ಡೆಯಂಗಡಿಯ ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವ ದೂರಿನ ಮೇರೆಗೆ ಮಂಗಳವಾರ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಸ್ವತಃ ದೋಣಿಯ ಮೂಲಕ ತೆರಳಿ ದಾಳಿ ನಡೆಸಿದ್ದಾರೆ.
Advertisement. Scroll to continue reading.
ಮೊವಾಡಿ, ನಾಡ ಹಾಗೂ ಬಡಾಕೆರೆ ವ್ಯಾಪ್ತಿಯಲ್ಲಿ ಅನೇಕ ಕಡೆ ಮರಳು ಗಣಿಗಾರಿಕೆಗೆ ನಡೆಸುವ ಮರಳು ದಕ್ಕೆಗಳಿದ್ದು, ಗಣಿ ಇಲಾಖೆಯ ಭೂವಿಜ್ಞಾನಿ ದಾಳಿ ನಡೆಸಿದ ಸಂದರ್ಭದಲ್ಲಿ ನಾಡ ಬಡಾಕೆರೆ ವ್ಯಾಪ್ತಿಯ ಕೆಲವೆಡೆ ಅನಧಿಕೃತ ಮರಳು ದಂಧೆ ನಡೆಸುವವರು ಮರಳು ಗಣಿಗಾರಿಕೆಗೆ ಬಳಸುವ ದೋಣಿಗಳನ್ನು ಹಾಗೂ ಇನ್ನಿತರ ಪರಿಕರಗಳನ್ನು ನೀರಿನಲ್ಲಿ ಮುಳುಗಿಸಿ ಪರಾರಿಯಾಗಿದ್ದಾರೆ.
0 ಬ್ರಹ್ಮಾವರ : ರುಡ್ ಸೆಟ್ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...