ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನದಿಂದ ಎಂಎಸ್ ಧೋನಿ ಕೆಳಗಿಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ನ ಮುಂಬರುವ ಆಟಗಳಲ್ಲಿ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಲಿದ್ದಾರೆ.
ಐಪಿಎಲ್ ನ ಅತ್ಯಂತ ಯಶಸ್ವಿ ನಾಯಕರಾಗಿದ್ದ ಅವರು 2008ರಿಂದ ಫ್ರಾಂಚೈಸಿಯ ನಾಯಕರಾಗಿದ್ದರು.
‘ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿದ್ದಾರೆ ಮತ್ತು ರವೀಂದ್ರ ಜಡೇಜಾ ಅವರನ್ನ ತಂಡವನ್ನು ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. 2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್ಕೆಯನ್ನ ಮುನ್ನಡೆಸಿದ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಋತುವಿನಲ್ಲಿ ಮತ್ತು ಅದರಾಚೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನ ಪ್ರತಿನಿಧಿಸುವುದನ್ನು ಮುಂದುವರಿಸಲಿದ್ದಾರೆ’ ಎಂದು ಸಿ ಎಸ್ ಕೆ ತಿಳಿಸಿದೆ.
Advertisement. Scroll to continue reading.