ಲಕ್ನೋ: ಭಾರತೀಯ ಜನತಾ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಂದ ಯೋಗಿ ಪ್ರಮಾಣ ವಚನ ಸ್ವೀಕರಿಸಿದರು.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರುಗಳು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement. Scroll to continue reading.
ಪ್ರಮಾಣ ವಚನ ಸಮಾರಂಭದಲ್ಲಿ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ 50,000ಕ್ಕೂ ಹೆಚ್ಚು ಜನ ಸೇರಿದ್ದರು.