ಮೈಸೂರು: ಪರೀಕ್ಷೆ ಬರೆಯುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರಿ ಮೃತ ವಿದ್ಯಾರ್ಥಿನಿ.ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಳು.
ನಿಗದಿತ ಸಮಯದಂತೆ ಆರಂಭಗೊಂಡಂತ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿ, ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
Advertisement. Scroll to continue reading.