ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
Advertisement. Scroll to continue reading.
ಕೆಲ ದಿನಗಳಿಂದ ರಾಯಚೂರು, ಧಾರವಾಡ, ಮಂಡ್ಯ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.