ಚಿತ್ರದುರ್ಗ : ಶವಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ಕಾತ್ರಾಳ್ ಕೆರೆ ಸೇತುವೆ ಬಳಿ ನಡೆದಿದೆ.
ಜಗಳೂರು ತಾಲೂಕು ಕೆಳಗೋಟೆ ನಿವಾಸಿಗಳಾದ ಹಾಲಪ್ಪ (70), ರುದ್ರಮ್ಮ (58), ಸಣ್ಣಬಸವರಾಜಪ್ಪ(45) ಎಂದು ಮೃತ ದುರ್ದೈವಿಗಳು.
ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಆಟೋ ದಲ್ಲಿ 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Advertisement. Scroll to continue reading.