ರಾಮನಗರ: ಮುಂದಿನ ಬಾರಿಯ ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಇವತ್ತಿನ ಹೇಳಿಕೆಗಳು ನೋಡಿದಾಗ ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ.
Advertisement. Scroll to continue reading.