ತುಮಕೂರು: ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಸ್ವಾಗತ ಭಾಷಣ ಮಾಡಿದ ವಿಜಯೇಂದ್ರ, ಅಕ್ಷರ ವಂಚಿತರ ಪಾಲಿಗೆ ಸಿದ್ಧಗಂಗಾ ಮಠ ಕಲ್ಪವೃಕ್ಷವಾಗಿದ್ದು, ನಾವು ಪ್ರತ್ಯಕ್ಷವಾಗಿ ಕಂಡ ದೇವರ ಹೆಸರನ್ನು ಶಾಲಾ ಮಕ್ಕಳಿಗೆ ಕೊಡುವ ಬಿಸಿಯೂಟ ಯೋಜನೆಗೆ ಇಡಬೇಕು ಎಂದು ಸಿಎಂಗೆ ವಿಜಯೇಂದ್ರ ಮನವಿ ಸಲ್ಲಿಸಿದರು.
ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ, ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಶ್ರೀ ಹೆಸರು ಇಡುವುದಾಗಿ ಘೋಷಿಸಿದರು.
Advertisement. Scroll to continue reading.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ ಜೊತೆ ಸದಾ ಇರುತ್ತದೆ. ಬದುಕನ್ನು ಕಟ್ಟಿಕೊಟ್ಟ ಪರಮಪೂಜ್ಯರು ಅವರು. ಎಲ್ಲಾ ಸಮುದಾಯದ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅದು ಸಾಮಾನ್ಯ ಮಾತಲ್ಲ. ಅದು ದೈವ ಶಕ್ತಿ. ಸ್ವಾಮೀಜಿಯವರು ಯಾವುದೇ ಜಾತಿ ಬೇದ ಮಾಡಿಲ್ಲ. ಸರ್ವೋದಯ ಅಂತ್ಯೋದಯ ಆಗಬೇಕು ಎಂದರು.