ಬ್ರಹ್ಮಾವರ : ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥೋತ್ಸವ: ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಮನವಿ
Published
3
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥೋತ್ಸವ ಜಾತ್ರೆ ಎಪ್ರಿಲ್ 22 ರಂದು ನಡೆಯಲಿದ್ದು ಅಂದು ಜಾತ್ರೆಯಲ್ಲಿ ವ್ಯಾಪಾರ ವ್ಯವಹಾರ ಮಾಡಲು ಹಿಂದುಯೇತರರಿಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ವಾರಂಬಳ್ಳಿ, ಹಂದಾಡಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ, ಬ್ರಹ್ಮಾವರ ತಹಶೀಲ್ದಾರ್ ರಾಜ ಶೇಖರ ಮೂರ್ತಿಯವರಿಗೆ ಮತ್ತು ದೇವಸ್ಥಾನದ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಭಟ್ ರಿಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಬ್ರಹ್ಮಾವರ ಪ್ರಖಂಡದ ಅಧ್ಯಕ್ಷ ರಾಘವೇಂದ್ರ ಕುಂದರ್ ಜೆ.ಬಿ ಯವರು ಮನವಿ ಸೋಮವಾರ ಸಲ್ಲಿಸಿದರು.