ಬೆಂಗಳೂರು: ಬೈಕ್ ಡಿಕ್ಕಿ ಹೊಡೆದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ಕೊಲೆ ಪ್ರಕರಣ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಕಮಲ್ ಪಂತ್, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5ರ ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಕಾಟನ್ಪೇಟೆಯ ಕ್ರಿಶ್ಚಿಯನ್ ಸಮುದಾಯದ ಚಂದ್ರು(22) ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಇವರ ಮತ್ತು ಶಾಹಿದ್ ಓಡಿಸುತ್ತಿದ್ದ ಬೈಕ್ಗೆ ಪರಸ್ಪರ ತಗುಲಿದೆ. ಈ ವಿಷಯಕ್ಕೆ ಮೊದಲು ಗಲಾಟೆಗೆ ಪ್ರಾರಂಭವಾಗಿದೆ.
ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.