ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಇಂದು ಬಿಜೆಪಿ ಕಚೇರಿಯಲ್ಲಿ ರೈತ ಮೋರ್ಚಾ ಮಂಡಲ ಅಧ್ಯಕ್ಷರಾದ ಸುನೀಲ್ ಶೆಟ್ಟಿ ಹೇರಿಕುದ್ರು ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ರೈತ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ರೈತ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರ ಮಟ್ಟದಲ್ಲಿ ರೈತಾಪಿ ವರ್ಗಕ್ಕೆ ನೀಡಿರುವ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಕಾರ್ಯವೈಖರಿ ಬಗ್ಗೆ ಹಾಗೂ ರೈತರು ಬೆಳೆಯುವ ಧಾನ್ಯಗಳಿಗೆ ಬೆಂಬಲ ಬೆಲೆಯ ಬಗ್ಗೆ, ಪಶುಸಂಗೋಪನೆ ಬಗ್ಗೆ ಮತ್ತು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನದ ಬಗ್ಗೆ ಚರ್ಚಿಸಲಾಯಿತು.
Advertisement. Scroll to continue reading.
ಸಭೆಯಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕಾಂಚನ್, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಕಾರ್ಯದರ್ಶಿ ಸುರೇಂದ್ರ ಸಂಗಮ್, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧೀರಜ್ ಮತ್ತು ರೈತ ಮೋರ್ಚಾದ ವಿವಿಧ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗೇಶ್ ಶೇರಿಗಾರ್ ಬಳ್ಕೂರು ಕಾರ್ಯಕ್ರಮ ನಿರೂಪಿಸಿ, ರೈತ ಮೋರ್ಚಾದ ಕಾರ್ಯವೈಖರಿಯ ವರದಿ ನೀಡಿದರು.
Advertisement. Scroll to continue reading.