ಕುಂದಾಪುರ : ಭಾರತೀಯ ಜನತಾ ಪಾರ್ಟಿ ಬೀಜಾಡಿ ಮಹಾಶಕ್ತಿ ಕೇಂದ್ರ : ವಿಶೇಷ ಸಭೆ
Published
3
ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಭಾರತೀಯ ಜನತಾ ಪಾರ್ಟಿ ಬೀಜಾಡಿ ಮಹಾಶಕ್ತಿ ಕೇಂದ್ರದ ವಿಶೇಷ ಸಭೆ ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರೀಕ ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿಯವರು ದೀಪ ಬೆಳಗಿಸಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬೀಜಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Advertisement. Scroll to continue reading.
ಮಂಡಲ ಪ್ರದಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಪ್ರಾಸ್ತಾವಿಕ ಮಾತನಾಡಿದರು.
ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ , ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಪತ್ ಶೆಟ್ಟಿ ಶಾನಾಡಿ, ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮನೋಜ್ ಕರ್ಕೇರ ವೇಧಿಕೆಯಲ್ಲಿ ಉಪಸ್ಥಿತರಿದ್ದರು.