ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

2

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement. Scroll to continue reading.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 24 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com